ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ರೆಸ್ಯೂಮ್ನಲ್ಲಿ ಮಾತೃಭಾಷೆ ಕನ್ನಡ ಎಂದು ನಮೂದಿಸಿದರೆ ಕೆಲಸ ಸಿಗುತ್ತಿಲ್ಲ. ತಮಿಳು, ತೆಲುಗು, ಹಿಂದಿ ಭಾಷೆಯವರನ್ನು ಹೆಚ್ಚಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂಬ ಯುವತಿಯ ವಿಡಿಯೋ ಭಾರೀ ಸದ್ದು ಮಾಡಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇದೀಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದೆ.