‘ರಂಗಿತರಂಗ’ ಜೋಡಿ ನಿರೂಪ್ ಭಂಡಾರಿ ಮತ್ತು ಸಾಯಿ ಕುಮಾರ್ ಒಟ್ಟಿಗೆ ನಟನೆ ಮಾಡಿರುವ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಚಿತ್ರದ ಪ್ರಮುಖ ಆಕರ್ಷಣೆಯಾಗಿ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ಕುಮಾರ್ ಅವರು ವಿಶೇಷ ಅತಿಥಿ ಪಾತ್ರದಲ್ಲಿ ನಟನೆ ಮಾಡುವ ಜೊತೆಗೆ, ತಮ್ಮ ಗಂಭೀರ ಧ್ವನಿಯನ್ನು ಹಿನ್ನೆಲೆಗೆ ನೀಡಿದ್ದಾರೆ. ಈ ಸಿನಿಮಾನಲ್ಲಿ ಸಾಯಿ ಕುಮಾರ್ ಸಹ ಪ್ರಮುಖ ಪಾತ್ರದಲ್ಲಿ ನಟನೆ ಮಾಡುತ್ತಿದ್ದಾರೆ.