ಖ್ಯಾತ ನಟ ಅರ್ಜುನ್ ಸರ್ಜಾ ಅವರ ಕಿರಿಯ ಪುತ್ರಿ ಅಂಜನಾ, ತಮ್ಮ ಬಹು ವರ್ಷದ ಪ್ರಿಯಕರ, ವಿದೇಶಿ ಪ್ರಜೆ ಇಸಾಯ್ ಜೊತೆಗೆ ವಿವಾಹವಾಗಿದ್ದಾರೆ. ಕಳೆದ ಹದಿನಾಲ್ಕು ವರ್ಷಗಳಿಂದಲೂ ಈ ಜೋಡಿ ಪ್ರೀತಿಯಲ್ಲಿತ್ತು. ಕಳೆದ ವರ್ಷ ಇಟಲಿಯಲ್ಲಿ ಇವರಿಬ್ಬರ ಎಂಗೇಜ್ಮೆಂಟ್ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆದಿತ್ತು. ಇಟಲಿ ಪ್ರಜೆಯಾಗಿರುವ ಇಸಾಯ್, ಉದ್ಯಮಿ ಆಗಿದ್ದು ಜಾಗತಿಕ ಬ್ರ್ಯಾಂಡಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಈ ಜೋಡಿ ಭಾರತೀಯ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಅರ್ಜುನ್ ಸರ್ಜಾ ಕುಟುಂಬ ಮತ್ತು ಇಸಾಯ್ ಅವರ ಕುಟುಂಬ ಮತ್ತು ಆಪ್ತರ ಸಮ್ಮುಖದಲ್ಲಿ ಭಾರತೀಯ ಸಂಪ್ರದಾಯದಂತೆ ವಿದೇಶದಲ್ಲಿ ವಿವಾಹ ಸಮಾರಂಭ ನಡೆದಿದೆ. ಅಂಜನಾ ಸರ್ಜಾ ಅವರು ಸಿನಿಮಾ ರಂಗದಿಂದ ಅಂತರ ಕಾಯ್ದುಕೊಂಡಿದ್ದರು.