ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಣೆಯು ಸ್ಟಿಂಗ್ ವಿಷಯದಿಂದ ಗಮನ ಬೇರೆಡೆಗೆ ಸೆಳೆಯಲು ರಾಜ್ಯ ಸರ್ಕಾರದ ತಂತ್ರ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್ನಲ್ಲಿ ಅಸಮಾಧಾನ ಮೂಡಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿ, ಅಕ್ಟೋಬರ್ 25: ರಾಜ್ಯದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಕೆಲವು ಕಡೆ ಅನುಮತಿ ನಿರಾಕರಣೆ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ‘ಸಹಿಷ್ಣುತೆ ಪಾಠ ಮಾಡೋರು ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ಕಳೆದ 70 ವರ್ಷದಿಂದ ದೇಶದಲ್ಲಿ ಪಥಸಂಚಲನ ನಡೆಯುತ್ತಿದೆ.