ಭಾರತದ ಮಾಜಿ ಕ್ರಿಕೆಟಿಗ ಅಜಿಂಕ್ಯ ರಹಾನೆ ತಮ್ಮ ಆಲ್ಟೈಮ್ ಟೆಸ್ಟ್ XI ಘೋಷಿಸಿದ್ದಾರೆ. ಆದರೆ, ಅವರ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಇಬ್ಬರಿಗೂ ಸ್ಥಾನ ಸಿಕ್ಕಿಲ್ಲ. ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಧೋನಿಗೆ ಪ್ರಾಧಾನ್ಯತೆ ನೀಡಿದ ರಹಾನೆ ಆಯ್ಕೆ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಮಹತ್ವದ ಆಟಗಾರರನ್ನು ಏಕೆ ಕೈಬಿಡಲಾಗಿದೆ ಎಂಬುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ತಮ್ಮ ಜೊತೆ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡ ಆಟಗಾರರ ಪೈಕಿ ಅತ್ಯುತ್ತಮ ಟೆಸ್ಟ್ ತಂಡವನ್ನು ಆಯ್ಕೆ ಮಾಡಿದ ಭಾರತದ ಮಾಜಿ ಆಟಗಾರ ಅಜಿಂಕ್ಯ ರಹಾನೆ, ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದಾರೆ.