ಲಖನೌ: ಉತ್ತರ ಪ್ರದೇಶದ ಮೌ ( Mau ) ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ( PM Modi ) ಅವರ ಫೋಟೋವನ್ನು ಬಳಸಿ ವಾಮಾಚಾರ ನಡೆಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀ. ಮೌ ಜಿಲ್ಲೆಯ ದೋಹರಿಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ತಿದಾಮ್ ಸ್ಮಶಾನದ ಬಳಿ ಪ್ರಧಾನಿ ಮೋದಿ ಅವರ ಫೋಟೋ ಇಟ್ಟು, ಅದರ ಸುತ್ತಲೂ ಮಾಟ-ಮಂತ್ರಕ್ಕೆ ಬಳಸುವ ವಸ್ತುಗಳನ್ನು ಇರಿಸಲಾಗಿತ್ತು. ಈ ದೃಶ್ಯಗಳ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾರ್ಯಾಚರಣೆಗಿಳಿದ ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ..