ವಿಜಯಪುರ: ಎಸ್ಐಆರ್ ಹೋರಾಟ ಸಮಿತಿ ಹಾಗೂ ಮತ ಕಾವಲು ಸಮಿತಿಯ ವತಿಯಿಂದ ಎಸ್ಐಆರ್ ಪ್ರಕ್ರಿಯೆ ವಿರೋಧಿಸಿ, ಅರ್ಹ ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆಯ ನಿಟ್ಟಿನ. ಅಂಬೇಡ್ಕರ್ ವೃತ್ತದವರೆಗೆ ಸಾಗುವ ಮೂಲಕ ಯಾತ್ರೆಯು ಸಂಪನ್ನಗೊಂಡಿತು. ತಿರಂಗಾ ಯಾತ್ರೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ತಮ್ಮ ಬೆಂಬಲ ಸೂಚಿಸಿದರು.ಮತದಾರರ ಪಟ್ಟಿಗೆ ಸಂಬಂಧಿಸಿದ ಎಸ್ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳು ಅನ್ಯಾಯವಾಗಿ ಕೈಬಿಡಬಾರದು. ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ತನ್ನ ಮತದಾನದ ಹಕ್ಕನ್ನು ಚಲಾಯಿಸುವ ಅವಕಾಶ ಖಚಿತವಾಗಬೇಕು.