ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ ಶುದ್ಧ ಸಾಹಿತ್ಯ ಮತ್ತು ಸಂಗೀತವನ್ನು ಒಳಗೊಂಡ ಗಮಕ ಕಲೆಯ ಮೂಲಕ ಪುರಾಣದ ಸಂದೇಶವನ್ನು ಯುವಜನರಿಗೆ ತಲುಪಿಸಲು ಸರ್ಕಾರದ ಪ್ರೋತ್ಸಾಹ ಅಗತ್ಯ. ಕರ್ನಾಟಕದ ಶಾಲಾ-ಕಾಲ. ಕರ್ನಾಟಕದ ಶಾಲಾ-ಕಾಲೇಜುಗಳ ಪ್ರತಿಭಾ ಕಾರಂಜಿಯಲ್ಲಿ ಗಮಕ ಕಲೆಯನ್ನು ಸೇರಿಸಿದರೆ ಮುಂದಿನ ಪೀಳಿಗೆಗೆ ಕಲೆಯನ್ನು ಉಳಿಸಲು ಸಾಧ್ಯ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಕರ್ನಾಟಕ ಗಮಕ ಕಲಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ಘಟಕಗಳ ಸಹಯೋಗದಲ್ಲಿ ಉಜಿರೆಯ ಎಸ್ಡಿಎಂ ಅನುದಾನಿತ ಸೆಕೆಂಡರಿ ಶಾಲೆಯ ಕೀರ್ತಿಶೇಷ ಮಂಜಯ್ಯ ಹೆಗ್ಗಡೆ ಸಭಾಭವನದ ವಿಜಯರಾಘವ ವೇದಿಕೆಯಲ್ಲಿ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ 12ನೇ ಗಮಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.