ಭಾರತ ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ಜಿಂಬಾಬ್ವೆ ವಿರುದ್ಧ ಶೂನ್ಯಕ್ಕೆ ಔಟಾಗಿದ್ದಾರೆ. ಇದು ಅವರ 5ನೇ ಏಕದಿನ ಡಕ್ ಔಟ್ ಆಗಿದ್ದು, ಭಾರತದ ಪರ ಆರಂಭಿಕ ಆಟಗಾರ್ತಿಯಾಗಿ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದವರ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ. ಜಯ ಶರ್ಮಾ (9) ಮತ್ತು ಜೆಮಿಮಾ ರೊಡ್ರಿಗಸ್ (6) ಮೊದಲ ಸ್ಥಾನದಲ್ಲಿದ್ದಾರೆ. ಭಾರತ ಮಹಿಳಾ ತಂಡದ ನೂತನ ನಾಯಕಿ ಸ್ಮೃತಿ ಮಂಧಾನ ಮತ್ತೊಮ್ಮೆ ಶೂನ್ಯಕ್ಕೆ ಔಟಾಗಿದ್ದಾರೆ. ವಡೋದರಾದಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಕೇವಲ 2 ಎಸೆತಗಳನ್ನು ಎದುರಿಸಿದ ಮಂಧಾನ ಯಾವುದೇ ರನ್ ಗಳಿಸದೆ ಪೆವಿಲಿಯನ್ಗೆ ಮರಳಿದ್ದಾರೆ.