ಬೆಳಗಾವಿಯಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಬಿಜೆಪಿ ಶಾಸಕ ವಿಠ್ಠಲ್ ಹಲಗೇಕರ್ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ರಸ್ತೆ ಸಮಸ್ಯೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಬಾರದ ಶಾಸಕರು ಈಗ ಏಕೆ ಬಂದರು ಎಂದು ಪ್ರಶ್ನಿಸಿದರು. ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸಲಾಗದೆ ಶಾಸಕರು ಕಕ್ಕಾಬಿಕ್ಕಿಯಾದರು. ಗ್ರಾಮಸ್ಥರು ಶಾಸಕರ ಕಾರು ತಡೆದು ಧಿಕ್ಕಾರ ಕೂಗಿದರು. ಬೆಳಗಾವಿ, ಅಕ್ಟೋಬರ್ 25: ‘ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ನೀವು ಬರಲಿಲ್ಲ, ಈಗ ಕಾಮಗಾರಿ ವೀಕ್ಷಣೆಗೆ ಬಂದಿದ್ದೀರಿ. ಜನರು ಸಮಸ್ಯೆಯಲ್ಲಿದ್ದಾಗ ಬರದ ನೀವು ಈಗ್ಯಾಕೆ ಬಂದಿದ್ದೀರಿ’ ಎಂದು ಬಿಜೆಪಿ ಶಾಸಕ ವಿಠ್ಠಲ್ ಹಲಗೇಕರ್ಗೆ ಗ್ರಾಮಸ್ಥರು ತರಾಟೆ ತೆಗೆದುಕೊಂಡು ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿಯಲ್ಲಿ ನಡೆದಿದೆ.