ಬೆಳ್ತಂಗಡಿ: ವೇಣೂರು ಠಾಣಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತ. ಶನಿವಾರ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾಗ, ಅಲ್ಲಿಗೆ ಬಂದ ಆರೋಪಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಆಯತಪ್ಪಿ ಬಾವಿಗೆ ಬಿದ್ದು ಸಾವುಕಾಸರಗೋಡು: ಕಳತ್ತೂರು ಕಾರಿಂಜ ಅಳಮನೆ ನಿವಾಸಿ ಸಂಜೀವ(55) ಎಂಬುವರ ಮೃತದೇಹ ಮನೆ ಸಮೀಪದ ಆವರಣಗೋಡೆಯಿಲ್ಲದ ಬಾವಿಯಲ್ಲಿ ಪತ್ತೆಯಾಗಿದೆ. ಇವರ ಪತ್ನಿ ಕೆಲಸಕ್ಕೆ ಹಾಗೂ ಪುತ್ರ ಕಾಲೇಜಿಗೆ ತೆರಳಿದ್ದ ಸಂದರ್ಭ ಹಗಲಿನಲ್ಲಿ ಒಂಟಿಯಾಗಿದ್ದರು.