ಈ ಬಾರಿಯ ಮೈಸೂರು ದಸರಾದಲ್ಲಿ ಅಂಬಾರಿ ಹೊರುವ ಆನೆ ಯಾವುದು ಎಂದು ಸಾಕಷ್ಟು ಕುತೂಹಲ ಕೆರಳಿಸಿತ್ತು. ಬಳಿಕ ಆ ಜವಾಬ್ದಾರಿಯನ್ನ ಪ್ರಶಾಂತ ಆನೆಗೆ ನೀಡಲಾಗಿತ್ತು. ಆದರೆ ಗಜಪಡೆ ಕ್ಯಾಪ್ಟನ್ ಆಯ್ಕೆ ವಿಷಯವನ್ನು ನನ್ನ ಬಳಿ ಮುಚ್ಚಿಡಲಾಗಿತ್ತು ಎಂದು ಪ್ರಮೋದಾದೇವಿ ಒಡೆಯರ್ ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸರ್ಕಾರಕ್ಕೆ ಕೆಲ ಮಹತ್ವದ ಸಲಹೆಗಳನ್ನು ನೀಡಿದ್ದಾರೆ. ಮೈಸೂರು, ಅಕ್ಟೋಬರ್ 25: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಎಂದರೆ ಬಂಬೂಸವಾರಿ. ಈ ಬಾರಿಯ ಬಂಬೂಸವಾರಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಕ್ಯಾಪ್ಟನ್ ಪ್ರಶಾಂತ ಅಂಬಾರಿಯಲ್ಲಿ ಚಾಮುಂಡೇಶ್ವರಿಯನ್ನ ಹೊತ್ತು ಮೆರೆಸಿದ್ದಾನೆ. ನಾನೇ ಖುದ್ದಾಗಿ ಕೇಳಿದರೂ ಮಾಹಿತಿ ಕೊಡಲಿಲ್ಲ ಈ ಕುರಿತಾಗಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.