ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ ಬೆನ್ನಲ್ಲೇ ಉದ್ಯಮಿ ಮೋಹನ್ ದಾಸ್ ಪೈ ಅವರು ಕಲ್ಯಾಣ ಕರ್ನಾಟಕದ ಉನ್ನತ ಶಿಕ್ಷಣದತ್ತ ಗಮನ ಸೆಳೆದಿದ್ದಾರೆ. ಕಡಿಮೆ GER, ಸಾಫ್ಟ್ ಸ್ಕಿಲ್ಸ್ ಕೊರತೆ, ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಅವಲಂಬನೆ ಕುರಿತು ಅವರು ಪ್ರಸ್ತಾಪಿಸಿದ್ದಾರೆ. ಬೆಂಗಳೂರು, ಅಕ್ಟೋಬರ್ 26: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ ಬೆನ್ನಲ್ಲೇ, ಉದ್ಯಮಿ ಮೋಹನ್ ದಾಸ್ ಪೈ ಅವರು ಉನ್ನತ ಶಿಕ್ಷಣದ ಗುಣಮಟ್ಟದ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದಾರೆ.