ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಐದು ವರ್ಷಗಳಲ್ಲಿ ಸುಮಾರು ಶೇ 70ರಷ್ಟು ಹೆಚ್ಚಾಗಿರುವ ಆಘಾತಕಾರಿ ಅಂಕಿಅಂಶ ಬಯಲಾಗಿದೆ. 2021ರಲ್ಲಿ 3,213 ಅಪಘಾತಗಳು ಸಂಭವಿಸಿದ್ದರೆ, 2025ರಲ್ಲಿ 5,459ಕ್ಕೆ ಏರಿಕೆಯಾಗಿದೆ. 2025ರಲ್ಲಿ 999 ಮಂದಿ ಮೃತಪಟ್ಟಿದ್ದು, 2026ರ ಮೊದಲ ಒಂಬತ್ತು ತಿಂಗಳಲ್ಲಿ 836 ಸಾವುಗಳು ದಾಖಲಾಗಿವೆ. ಬೆಂಗಳೂರು, ಅಕ್ಟೋಬರ್ 26: ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿರುವುದು ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿಅಂಶಗಳಿಂದ ತಿಳಿದುಬಂದಿದೆ. ಕಳೆದ ಐದು ವರ್ಷಗಳಲ್ಲಿ ನಗರದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಸುಮಾರು ಶೇ 70ರಷ್ಟು ಏರಿಕೆಯಾಗಿದೆ. 2021ರಲ್ಲಿ 3,213 ಅಪಘಾತಗಳು ಸಂಭವಿಸಿದ್ದರೆ, 2025ರಲ್ಲಿ ಈ ಸಂಖ್ಯೆ 5,459ಕ್ಕೆ ತಲುಪಿದೆ.