Ramayana Song: ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ 'ರಾಮಾಯಣ' ಚಿತ್ರದ ಟೀಸರ್, ಟ್ರೈಲರ್ ಈಗಾಗಲೇ ಬಿಡುಗಡೆಯಾಗಿದ್ದು, ಸಿನಿಪ್ರಿಯರಲ್ಲಿ ಕಲ್ಪನೆಗೂ ಮೀರಿದ ನಿರೀಕ್ಷೆಗಳನ್ನು ಹುಟ್. ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅವರ ಅದ್ಭುತ ನಟನೆ ಮತ್ತು ತೆರೆಯ ಮೇಲಿನ ಖಳನಾಯಕನ ಖದರ್ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದ್ದು, ಇನ್ನೇನು ಚಿತ್ರದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ ಎನ್ನುವಾಗ ಹೊಸ ವಿವಾದವೊಂದು ಭುಗಿಲೆದ್ದಿದೆ. ಬಿಗ್ ಬಜೆಟ್ 'ರಾಮಾಯಣ' ಸಿನಿಮಾದ 'ಮಂಗಳ ರಂಗ್' ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ಮತ್ತು ಟೀಕೆಗಳಿಗೆ ಗ್ರಾಸವಾಗಿದೆ. ಆಸ್ಕರ್ ವಿಜೇತ, ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಎ.ಆರ್.