Jobs for Kannadigas: Industries Must Provide Employment to Eligible Locals, Says G. Parameshwara. ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಕೈಗಾರಿಕೆಗಳಿಕೆ ಅವಕಾಶ ನೀಡುವುದು ಹಾಗೂ ಅಲ್ಲಿ ಕನ್ನಡಿಗರಿಗೆ ಆದ್ಯತೆ ಕೊಡುವ ವಿಚಾರದ ಬಗ್ಗೆ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಮಾತನಾಡಿದ್ದಾರೆ.ಕೈಗಾರಿಕೆಗಳಿಗೆ ಸರ್ಕಾರದಿಂದ ಸೌಲಭ್ಯ, ಅರ್ಹ ಕನ್ನಡಿಗರಿಗೆ ಉದ್ಯೋಗ ನೀಡುವುದು ಉದ್ಯಮಿಗಳ ಜವಾಬ್ದಾರಿ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ವಿಚಾರದಲ್ಲಿ ಸರ್ಕಾರದ ನಿಲುವು ಸ್ಪಷ್ಟ ಇದೆ ಎಂದಿದ್ದಾರೆ. ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳು ಅರ್ಹ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕು.