ಸಂಪೂರ್ಣ ಎಥೆನಾಲ್ (E100) ಇಂಧನದಿಂದ ಚಲಿಸುವ ವಾಹನಗಳ ಬಳಕೆಗೆ ಕೇಂದ್ರ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಕೇಂದ್ರ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಫ್ಲೆಕ್ಸ್-ಫ್ಯುಯೆಲ್ ವಾಹನಗಳ ತಯಾರಿಕೆಗೆ ದಾರಿ ಮಾಡಿಕೊಡಲಾಗಿದೆ. ಇ100 ಇಂಧನದಲ್ಲಿ ಪೆಟ್ರೋಲ್ ಮಿಶ್ರಣ ನಗಣ್ಯವಿರುತ್ತದೆ. ಇದರಿಂದ ಕಚ್ಚಾ ತೈಲ ಆಮದನ್ನು ಕಡಿಮೆ ಮಾಡಿಕೊಳ್ಳುವ ಅವಕಾಶ ಇರುತ್ತದೆ. ನವದೆಹಲಿ, ಅಕ್ಟೋಬರ್ 26: ಕಚ್ಚಾ ತೈಲದ ಮೇಲಿನ ಅವಲಂಬನೆಯನ್ನು ತಗ್ಗಿಸುವ ಮತ್ತು ಪರಿಸರ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯೊಂದನ್ನು ಇರಿಸಿದೆ.