ಕೇಂದ್ರ ಗೃಹ ಸಚಿವ ಅಮಿತ್ ಶಾ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ' ಅಭಿಯಾನದ ಭಾಗವಾಗಿ ನವೆಂಬರ್ 5ರಂದು ಹರಿಯಾಣದ ಕರ್ನಾಲ್ಗೆ ಆಗಮಿಸಲಿದ್ದು, ಅಲ್ಲಿ ಆಯೋಜಿಸಲಾಗಿರುವ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದೆಹಲಿಯಲ್ಲಿ ನವೆಂಬರ್ 1ರಂದು ಕಾಂಗ್ರೆಸ್ ಹಮ್ಮಿಕೊಂಡಿರುವ ಬೃಹತ್ ರ್ಯಾಲಿಯ ಬೆನ್ನಲ್ಲೇ, ನವೆಂಬರ್ 2ರಂದು ಹೈದರಾಬಾದ್ನಲ್ಲಿ ಮತ್ತು ನವೆಂಬರ್ 5ರಂದು ಹರಿಯಾಣದ ಕರ್ನಾಲ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆಗಳನ್ನು ಆಯೋಜಿಸಲಾಗಿದೆ.