ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ T20 ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದ್ದು, 3ನೇ ಪಂದ್ಯದಲ್ಲಿ ಸರಣಿ ಗೆಲ್ಲಲು ಸಜ್ಜಾಗಿದೆ. ಇಶಾನ್ ಕಿಶನ್ ಗಾಯದಿಂದ ಹೊರಗುಳಿದಿದ್ದು, ವೈಭವ್ ಸೂರ್ಯವಂಶಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ಶಿವಂ ದುಬೆ ಆಡುವ ಹನ್ನೊಂದರ ಬಳಗಕ್ಕೆ ಸೇರಿಕೊಳ್ಳುವ ನಿರೀಕ್ಷೆಯಿದೆ. ಬೌಲಿಂಗ್ ವಿಭಾಗದಲ್ಲಿ ಹೆಚ್ಚು ಬದಲಾವಣೆಗಳಿಲ್ಲ, ಆದರೆ ಬ್ಯಾಟಿಂಗ್ ವಿಭಾಗದಲ್ಲಿ ಕೆಲ ಹೊಸ ಮುಖಗಳು ಕಾಣಿಸಬಹುದು. ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ 2-0 ಮುನ್ನಡೆ ಸಾಧಿಸಿದೆ. ಇದೀಗ ಮೂರನೇ ಪಂದ್ಯ ಮಂಗಳವಾರ ವೆಲ್ಲಿಂಗ್ಟನ್ನಲ್ಲಿ ನಡೆಯಲಿದೆ.