ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ರೇಣುಕಾ ಯಲ್ಲಮ್ಮನ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು 215 ಕೋಟಿಗೂ ಹೆಚ್ಚು ಅನುದಾನದಲ್ಲಿ ದೇಗುಲದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಈ ಯೋಜನೆಗಳು ಭಕ್ತಾದಿಗಳಿಗೆ ಅನುಕೂಲವಾಗಲಿದ್ದು, ದೇವಸ್ಥಾನದ ಪ್ರಾಧಿಕಾರದ ರಚನೆ ಮತ್ತು ಪ್ರಗತಿಗೆ ಒತ್ತು ನೀಡಲಾಗಿದೆ ಎಂದರು. ಬೆಳಗಾವಿ, ಅಕ್ಟೋಬರ್ 26: ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಂಕಷ್ಟ ಆಲಿಸುವುದಕ್ಕೆ ಖುದ್ದು ಸಿಎಂ ಡಿಕೆ ಶಿವಕುಮಾರ್ ಜಿಲ್ಲೆಗೆ ಆಗಮಿಸಿದ್ದಾರೆ. ರೈತರೊಂದಿಗಿನ ಸಭೆಗೂ ಮುನ್ನ ಶೀಗೆ ಹುಣ್ಣಿಮೆ ಹಿನ್ನೆಲೆ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಿ ದರ್ಶನ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಶೀಗೆ ಹುಣ್ಣಿಮೆ ದಿನ ಯಲ್ಲಮ್ಮ ದೇವಿ ದರ್ಶನ ಪಡೆದಿದ್ದೇನೆ.