ಕೊಡಗು ಜಿಲ್ಲೆ ಪೊನ್ನಂಪೇಟೆಯ ಬೆಳ್ಳೂರು ಗ್ರಾಮದಲ್ಲಿ ಹುಲಿ ದಾಳಿಗೆ ರೈತನ 13ನೇ ಹಸು ಬಲಿಯಾಗಿದ್ದು, ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಡವಾಗಿ ಸ್ಥಳಕ್ಕೆ ಬಂದ ಡಿಸಿಎಫ್ ವಿನೀತ್ ಚೌಹಾಣ್ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದು, ದರ್ಪ ತೋರಿದ್ದಕ್ಕಾಗಿ ಅಧಿಕಾರಿಗಳ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಲಿಯನ್ನು ಸೆರೆಹಿಡಿಯುವಂತೆ ರೈತರು ಆಗ್ರಹಿಸಿದ್ದಾರೆ. ಕೊಡಗು, ಅಕ್ಟೋಬರ್ 27: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಹುಲಿ ದಾಳಿಗೆ ಒಬ್ಬನೇ ರೈತನ 13ನೇ ಹಸು ಬಲಿಯಾದ ಘಟನೆ ನಡೆದಿದ್ದು, ಸ್ಥಳೀಯ ರೈತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಖಂಡಿಸಿ ರೈತ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.