ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ಅರ್ನಾಬ್ ಚಂಡಮಾರುತವು ಆಂಧ್ರಪ್ರದೇಶದ ಕಾಕಿನಾಡ ಕರಾವಳಿಗೆ ನಾಳೆ ಬೆಳಗ್ಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದ್ದು, ಗಂಟೆಗೆ 160 ಕಿ.ಮೀ. ವೇಗದ ಗಾಳಿ, ಧಾರಾಕಾರ ಮಳೆ, ಪ್ರವಾಹ ಮತ್ತು 5 ಮೀಟರ್ ಎತ್ತರದ ಅಲೆಗಳ ಸಾಧ್ಯತೆ ಇದೆ. ಸ್ಥಳೀಯ ಆಡಳಿತವು ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದೆ. ಅಮರಾವತಿ, ಅಕ್ಟೋಬರ್ 27: ಬಂಗಾಳ ಕೊಲ್ಲಿಯಲ್ಲಿ ಪ್ರಬಲಗೊಂಡಿರುವ ಅರ್ನಾಬ್ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯತ್ತ ಧಾವಿಸುತ್ತಿದೆ. ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಈ ಚಂಡಮಾರುತವು ನಾಳೆ ಬೆಳಗ್ಗೆ ಕಾಕಿನಾಡ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ.