'ಅರ್ನಬ್' ಚಂಡಮಾರುತ ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕರಾವಳಿ ರೈಲ್ವೆ ಹಲವು ಪ್ರಮುಖ ರೈಲುಗಳ ಸಂಚಾರವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಬುಧವಾರ ಬೆಳಗ್ಗೆ ಉತ್ತರ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ. ನವದೆಹಲಿ, ಅಕ್ಟೋಬರ್ 27: ‘ಅರ್ನಬ್’ ಚಂಡಮಾರುತ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರತೀಯ ರೈಲ್ವೆ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ.