ಚೆನ್ನೈ: ಮಲಯಾಳಂ ಬ್ಯೂಟಿ ನಜ್ರಿಯಾ ನಜೀಮ್ ( Nazriya Nazim ) ತಮ್ಮ ಸಹಜ ಅಭಿನಯ ಹಾಗೂ ಮುದ್ದಾದ ನೋಟದಿಂದಲೇ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ. ಮಲಯ. ಮಲಯಾಳಂ ಹಾಗೂ ತಮಿಳು ಸಿನಿಮಾಗಳ ಮೂಲಕ ಕೋಟ್ಯಂತರ ಪ್ರೇಕ್ಷಕರ ಮನಗೆದ್ದಿರುವ ನಜ್ರಿಯಾ, ಇದೀಗ ಸೂರ್ಯ ಅಭಿನಯದ ಬಹುನಿರೀಕ್ಷಿತ ತಮಿಳು ಸಿನಿಮಾ 'ಸೀನ್' (Scene) ಮೂಲಕ ಕಾಲಿವುಡ್ಗೆ ಭರ್ಜರಿ ಕಮ್ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಜೀತು ಮಾಧವನ್ ನಿರ್ದೇಶನದ ಈ ಸಿನಿಮಾದ ಮೇಲೆ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿಯಾಗಿದೆ.ಇತ್ತೀಚೆಗೆ ದುಬೈನಲ್ಲಿ ಈ ಸಿನಿಮಾದ ಪ್ರಚಾರ ಕಾರ್ಯಕ್ರಮ ಆಯೋಜನೆಗೊಂಡಿತ್ತು.