ಇಂದು (ಅ.27) ಅಧಿಕೃತ ನಿವಾಸ ಕೃಷ್ಣಾದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ವಿಧಾನಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರೊಂದಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಸಭೆ ನಡೆಸಿದ್ದು, ಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ. ಅಲ್ಲದೇ 500 ಕಿ.ಮೀ ಹೊಸ ರಸ್ತೆ ಸಂಪರ್ಕ ನಿರ್ಮಾಣದ ಬಗ್ಗೆ ಹೇಳಿದ್ದಾರೆ. ಬೆಂಗಳೂರು, ಅ.27: ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು 40 ಕಿ.ಮೀ ಉದ್ದದ ದ್ವಿಪಥ ಸುರಂಗ ಮಾರ್ಗ, 120 ಕಿ.ಮೀ ಉದ್ದದ ಎತ್ತರಿಸಿದ ಕಾರಿಡಾರ್, 1500 ಕಿ.ಮೀ ಆರ್ಟಿಲರಿ ಮತ್ತು ಸಬ್ ಆರ್ಟಿಲರಿ ರಸ್ತೆಗಳ ಉನ್ನತೀಕರಣ ಕಾರ್ಯ ಕೈಗೊಳ್ಳಲಾಗಿದ್ದು, ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.