ಬೆಂಗಳೂರು: ಕಾಂಗ್ರೆಸ್ ಹೋರಾಟ ಎಸ್ಐಆರ್ಗೆ ಮಾತ್ರ ಸೀಮಿತವಾಗಿಲ್ಲ. ಚುನಾವಣೆ ದುರ್ಬಲಗೊಳಿಸುವಿಕೆ, ಅಕ್ರಮ, ಇವಿಎಂ ಮತ್ತು ವಿವಿಪ್ಯಾಟ್ಗಳ ನಿರ್ವಹಣೆ ವಿರುದ್ಧವೂ ಧ್ವನಿ ಎತ್ತುತ್ತಿದ್ದೇವೆ ಎಂ. ಕರ್ನಾಟಕ, ಹರಿಯಾಣ ಸೇರಿ ವಿವಿಧ ರಾಜ್ಯಗಳಲ್ಲಿ ನಡೆದ ಅಕ್ರಮಗಳ ಕುರಿತಾದ ಪ್ರಶ್ನೆಗೆ ನಮಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ದೂರಿದರು.ಎಸ್ಐಆರ್ ಅಡಿ ದೇಶದಾದ್ಯಂತ 13 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲಾಗಿದೆ. ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆ ಆಗದಂತೆ ಈ ಪ್ರಕ್ರಿಯೆ ನಡೆಯಬೇಕು ಎಂದು ಆಗ್ರಹಿಸಿದರು. ಇತ್ತೀಚೆಗೆ ಕರ್ನಾಟಕದಲ್ಲೇ 60-70 ಸಾವಿರ ಮತದಾರರ ಹೆಸರುಗಳನ್ನು ಸಮರ್ಪಕ ಕಾರಣವಿಲ್ಲದೆ ಅಳಿಸಲಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.