ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಉಚಿತವಾಗಿ ನಡೆಯುತ್ತಿರುವ ಪ್ಲಾಸ್ಟಿಕ್ ಸರ್ಜರಿ ಶಸ್ತ್ರಚಿಕಿತ್ಸಾ ಶಿಬಿರಕ್ಕೆ ರಾಜ್ಯದ ವಿವಿಧೆಡೆಗಳಿಂದ ಸುಮಾರು 200ಕ್ಕೂ ಹೆಚ್ಚು ರೋಗಿಗಳು. ಈ ರೋಗಿಗಳನ್ನು ತಪಾಸಣೆ ನಡೆಸುತ್ತಿರುವ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಅಗತ್ಯ ಇರುವವರಿಗೆ ಹಾಗೂ ಬಡವರಿಗೆ, ಚಿಕ್ಕ ಮಕ್ಕಳಿಗೆ ಮೊದಲ ಆದ್ಯತೆಯ ಮೇರೆಗೆ ಶಸ್ತ್ರಚಿಕಿತ್ಸೆಗೆ ಅಂತಿಮಗೊಳಿಸಲಿದೆ.ನೊಂದಾಯಿಸಿಕೊಂಡಿರುವ ರೋಗಿಗಳನ್ನು ಮಂಗಳವಾರ ಆದಿಚುಂಚನಗಿರಿ ನಾಗಮಂಗಲ ಶಾಖೆಯ ಶ್ರೀ ಸತ್ಕೀರ್ತಿನಾಥ ಸ್ವಾಮೀಜಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಸುಟ್ಟ ಗಾಯಗಳ ಬಗ್ಗೆ ಮಾಹಿತಿ ಪಡೆದು ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಿದರು. ರೋಗಿಗಳು ಹಾಗೂ ಅವರ ಸಂಬಂಧಿಕರಿಂದ ಮಾಹಿತಿ ಪಡೆದ ನಂತರ ಅಮೆರಿಕದಿಂದ ಶಸ್ತ್ರಚಿಕಿತ್ಸೆಗೆ ಆಗಮಿಸಿರುವ ವೈದ್ಯರ ತಂಡದೊಂದಿಗೆ ಚರ್ಚಿಸಿದರು.