ಉಪ್ಪಿನಂಗಡಿ, ಆ.16: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯರ ನೇಮಕ ಸಹಿತ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ಗೆ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್... ನೇತೃತ್ವದ ನಿಯೋಗ ಮನವಿ ಸಲ್ಲಿಸಿತು.ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರವು 75 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ಏಳು ಗ್ರಾಪಂಗಳ ಸುಮಾರು 24,045ಕ್ಕೂ ಅಧಿಕ ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿದೆ. ಉಪ್ಪಿನಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರು ಈ ಆರೋಗ್ಯ ಕೇಂದ್ರವನ್ನೇ ಅವಲಂಬಿಸಿರುವುದರಿಂದ ಕೇಂದ್ರದಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸುವುದು ತುರ್ತು ಅಗತ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.