ಬೆಂಗಳೂರು ಮೆಟ್ರೋದಲ್ಲಿ ಯುವತಿಯನ್ನು ಯುವಕನೊಬ್ಬ ರಹಸ್ಯವಾಗಿ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತೆಯು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಆಕೆ ನೀಡಿದ ದೂರಿನ ಮೇರೆಗೆ ಕಾಡುಗೋಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಆರೋಪಿಯ ಗುರುತು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ. ಬೆಂಗಳೂರು, ಅಕ್ಟೋಬರ್ 28: ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರನ್ನು ಸಹಪ್ರಯಾಣಿಕನೊಬ್ಬ ರಹಸ್ಯವಾಗಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಸೌಪಿಕಾ ಎಂಬ ಹೆಸರಿನಲ್ಲಿ ಇನ್ಸ್ಟಾಗ್ರಾಂನಲ್ಲಿ ಗುರುತಿಸಿಕೊಂಡಿರುವ ಮಹಿಳೆ, ಈ ಘಟನೆ ಮಂಗಳವಾರ ಸಂಜೆ ಸುಮಾರು 4.