ಬೆಂಗಳೂರು, ಸೆ. 07 (DaijiworldNews/TA): ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಸೀಸನ್ 13 ಅದ್ಧೂರಿಯಾಗಿ ಆರಂಭಗೊಂಡಿದೆ. ಗ್ರ್ಯಾಂಡ್ ಓಪನಿಂಗ್ ಕಾರ್ಯಕ್ರಮದಲ್ಲಿ ಒಬ್ಬೊಬ್ಬರಾಗಿ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದು, ಈ ಬಾರಿ ಸಿನಿಮಾ, ಕಿರುತೆರೆ, ಮಾಡೆಲಿಂಗ್, ರಂಗಭೂಮಿ ಹಾಗೂ ಸೋಷಿಯಲ್ ಮೀಡಿಯಾ ಕ್ಷೇತ್ರದ ಹಲವು ಪರಿಚಿತ ಮುಖಗಳು ಮನೆಯೊಳಗೆ ಕಾಲಿಟ್ಟಿದ್ದಾರೆ. ಕಿಚ್ಚ ಸುದೀಪ್ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಪರ್ಧಿಗಳು ತಮ್ಮ ವ್ಯಕ್ತಿತ್ವ, ವೃತ್ತಿಜೀವನ ಹಾಗೂ ಬಿಗ್ಬಾಸ್ ಆಟದ ಬಗ್ಗೆ ಮಾತನಾಡಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಕೆಲವರು ವಿಭಿನ್ನ ಟಾಸ್ಕ್ಗಳ ಮೂಲಕ ಮನೆಯೊಳಗೆ ಪ್ರವೇಶಿಸಿದರೆ, ಇನ್ನು ಕೆಲವರು ತಮ್ಮದೇ ಸ್ಟೈಲ್ನಲ್ಲಿ ಗ್ರ್ಯಾಂಡ್ ಎಂಟ್ರಿ ನೀಡಿದ್ದಾರೆ.