ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ತೀವ್ರ ಕು. ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ವಿರುದ್ಧ ಸ್ಪಷ್ಟ ಮೇಲುಗೈ ಸಾಧಿಸಿರುವ ಸುರೇಶ್ ಗೆಲುವಿನ ನಗೆ ಬೀರಿದ್ದಾರೆ. ಎನ್ಡಿಎ ಅಭ್ಯರ್ಥಿ ಸುರೇಶ್ ಒಟ್ಟು 66,020 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ 42,922 ಮತಗಳನ್ನು ಗಳಿಸಿದರು. ಸುರೇಶ್ ಅವರು 23,098 ಮತಗಳ ಭರ್ಜರಿ ಅಂತರದಿಂದ ಗೆಲುವು ಸಾಧಿಸಿದ್ದು, ವಿಶೇಷವೆಂದರೆ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವು ನಿರ್ಣಯವಾಗಿದೆ.