ಭಾರತ ಮಹಿಳಾ ತಂಡ ಜಿಂಬಾಬ್ವೆ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ವೈಷ್ಣವಿ ಶರ್ಮಾ 5 ವಿಕೆಟ್ಗಳನ್ನು ಕಬಳಿಸಿದರೆ, ಶಫಾಲಿ ವರ್ಮಾ (51) ಮತ್ತು ಪ್ರತೀಕಾ ರಾವಲ್ (59) ಅಮೋಘ ಅರ್ಧಶತಕ ಸಿಡಿಸಿ ತಂಡಕ್ಕೆ ಸುಲಭ ಗೆಲುವು ತಂದಿತ್ತರು. ಬೌಲಿಂಗ್ ಹಾಗೂ ಬ್ಯಾಟಿಂಗ್ನಲ್ಲಿ ಭಾರತದ ಆಟಗಾರ್ತಿಯರ ಪ್ರಾಬಲ್ಯ ಎದ್ದು ಕಾಣಿಸಿತು. ಜಿಂಬಾಬ್ವೆ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಭಾರತ ಮಹಿಳಾ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಮೊದಲು ಬೌಲಿಂಗ್ನಲ್ಲಿ ಎದುರಾಳಿ ತಂಡವನ್ನು ಕಟ್ಟಿಹಾಕಿದ ಟೀಂ ಇಂಡಿಯಾ, ಬಳಿಕ ಬ್ಯಾಟಿಂಗ್ನಲ್ಲೂ ಅಬ್ಬರಿಸಿ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.