‘ಫೌಜಿ’ ಸಿನಿಮಾ ಟೀಸರ್ನಲ್ಲಿ ಭೋಸ್ ಅವರ ಪಾತ್ರವನ್ನು ಸರಿಯಾಗಿ ತೋರಿಸಿಲ್ಲ ಎಂಬುದು ಒಂದಾದರೆ, ಜೊತೆಗೆ ಇತಿಹಾಸವನ್ನು ತಿರುಚಲಾಗಿದೆ ಎಂದು ಸಹ ಆರೋಪಗಳು ಕೇಳಿ ಬಂದಿದೆ. ಇದೀಗ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ, ಸಾಮಾಜಿಕ-ರಾಜಕೀಯ ಕಾರ್ಯಕರ್ತ ಹಾಗೂ ಪಶ್ಚಿಮ ಬಂಗಾಳದ ಮಾಜಿ ಬಿಜೆಪಿ ಉಪಾಧ್ಯಕ್ಷ ಚಂದ್ರ ಕುಮಾರ್ ಬೋಸ್ ಅವರು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಪತ್ರ ಬರೆದಿದ್ದು, ‘ಫೌಜಿ’ ಸಿನಿಮಾ ಬಿಡುಗಡೆಯನ್ನು ತಡೆಯಬೇಕೆಂದು ಒತ್ತಾಯಿಸಿದ್ದಾರೆ.