ಕಿಕ್ಕೇರಿ: ಹೋಬಳಿಯ ಸಾಸಲು ಕ್ಷೇತ್ರದ ಸೋಮೇಶ್ವರ, ಶಂಭುಲಿಂಗೇಶ್ವರ ದೇಗುಲ ಬಯಲು ಸೀಮೆಯ ಕುಕ್ಕೆ ಸುಬ್ರಹ್ಮಣ್ಯ ಎಂದು ಪ್ರಸಿದ್ಧಿ ಹೊಂದಿದ್ದು, ಕಾರ್ತಿಕ ಮಾಸದಲ್ಲಿ ಜರುಗಲಿರುವ ಜಾತ್ರೆಗೆ ಮೂಲಸೌಕ. ಮಂಜು ಸೂಚಿಸಿದರು.ಮಂಗಳವಾರ ಜಾತ್ರೆ ವಿಶೇಷ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಾರ್ತಿಕ ಮಾಸದಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ದೇಗುಲಕ್ಕೆ ಹರಕೆ ಹೊತ್ತು ಬರುತ್ತಾರೆ. ಮುಜರಾಯಿ ಇಲಾಖೆ ದೇಗುಲವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ. ಸೋಮೇಶ್ವರ, ಶಂಭುಲಿಂಗೇಶ್ವರ ಪುಷ್ಕರಣಿಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುವುದರಿಂದ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು.