ಕೆ.ಆರ್.ಪೇಟೆ: ತಾಲೂಕಿನ ಬೂಕನಕೆರೆ ಹೋಬಳಿಯ ಬಳ್ಳೇಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2007-08ನೇ ಸಾಲಿನ ಎಸ್ಎಸ್ಎಲ್ಸಿ ಹಳೆಯ ವಿದ್ಯಾರ್ಥಿಗಳ ವತಿಯಿಂದ ಇತ್ತೀಚೆಗೆ ಗುರುವಂದನಾ ಕಾರ್ಯಕ. ಈ ಸಂದರ್ಭದಲ್ಲಿ ಶಾಲಾ ದಿನಗಳ ಸವಿನೆನಪುಗಳನ್ನು ಮೆಲುಕು ಹಾಕಿ, ಜೀವನ ರೂಪಿಸುವಲ್ಲಿ ಶಿಕ್ಷಕರ ಮಾರ್ಗದರ್ಶನ ಹಾಗೂ ಶಿಸ್ತುಬದ್ಧ ಶಿಕ್ಷಣದ ಪಾತ್ರವನ್ನು ಹಳೆಯ ವಿದ್ಯಾರ್ಥಿಗಳು ಸ್ಮರಿಸಿದರು.ಮುಖ್ಯ ಶಿಕ್ಷಕ ಗಿರೀಶ್ ಮಾತನಾಡಿ, ಹಲವು ವರ್ಷಗಳ ನಂತರವೂ ಗುರುಗಳನ್ನು ವಿದ್ಯಾರ್ಥಿಗಳು ನೆನಪಿಸಿಕೊಂಡು ಗೌರವ ಸಲ್ಲಿಸುತ್ತಿರುವುದು ಸಂತಸದ ಸಂಗತಿ. ಇಂತಹ ಕಾರ್ಯಕ್ರಮಗಳು ಗುರು-ಶಿಷ್ಯರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವುದರ ಜತೆಗೆ ಇಂದಿನ ವಿದ್ಯಾರ್ಥಿಗಳಿಗೂ ಉತ್ತಮ ಸಂದೇಶ ನೀಡುತ್ತವೆ ಎಂದರು.ಕಾರ್ಯಕ್ರಮದಲ್ಲಿ ಬಿ.ಆರ್.ವೆಂಕಟೇಶ್, ಡಿ.ಆರ್.