‘ಪೆದ್ದಿ’ ಸಿನಿಮಾ ಬಿಡುಗಡೆಯಾಗಿ ತಿಂಗಳುಗಳು ಕಳೆದರೂ ಆ ಚಿತ್ರದ ಬಗೆಗಿನ ಚರ್ಚೆಗಳು ನಿಂತಿಲ್ಲ. ಸಿನಿಮಾದ ನಟಿ ಜಾನ್ವಿ ಕಪೂರ್ ಅವರ ‘ಕಾಫಿ ವಿತ್ ಕರಣ್’ ಶೋನಲ್ಲಿ ‘ಪೆದ್ದಿ’ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಆ ಚಿತ್ರದಲ್ಲಿ ತಮ್ಮ ಪಾತ್ರವನ್ನು ತೋರಿಸಿರುವ ರೀತಿ ಸರಿ ಇರಲಿಲ್ಲ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶನದ, ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದಲ್ಲಿ ತಮ್ಮ ಪಾತ್ರವನ್ನು ಚಿತ್ರೀಕರಿಸಿದ ಶೈಲಿಯ ಕುರಿತು ಬಾಲಿವುಡ್ ನಟಿ ಜಾನ್ವಿ ಕಪೂರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ನಾಯಕಿಯ ಪಾತ್ರವನ್ನು ಅತಿ ಗ್ಲಾಮರಸ್ ಆಗಿ ತೋರಿಸಲಾಗಿತ್ತು ಎಂಬ ತೀವ್ರ ಟೀಕೆಗಳು ಎದುರಾಗಿದ್ದವು.