ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದಂಗಲ್ ಮುಂದುವರೆದಿದೆ. ಸಚಿವ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ಬೆನ್ನಲ್ಲೇ ಇದೀಗ ಪೊಲೀಸ್ ಕಮಿಷನರ್ ಸರದಿ. ಪ್ರಮೋದಾದೇವಿ ಒಡೆಯರ್ ಆಕ್ಷೇಪಗಳಿಗೆ ಪತ್ರದ ಮೂಲಕ ಸೀಮಾ ಲಾಟ್ಕರ್ ಸ್ಪಷ್ಟನೆ ನೀಡಿದ್ದಾರೆ. ಮೈಸೂರು ಅರಮನೆ ಧಾರ್ಮಿಕ ಕಾರ್ಯಗಳಿಗೆ ಅಡ್ಡಿಪಡಿಸಿಲ್ಲ ಎಂದಿದ್ದಾರೆ. ಮೈಸೂರು, ಅಕ್ಟೋಬರ್ 28: ದಸರಾ ವೇಳೆ ಉಂಟಾದ ಗೊಂದಲಗಳ ಬಗ್ಗೆ ರಾಜಮಾತೆ ಪ್ರಮೋದಾದೇವಿ ಬೇಸರ ವ್ಯಕ್ತಪಡಿಸಿ ಬರೆದಿರುವ ಪತ್ರ ಕೋಲಾಹಲ ಸೃಷ್ಟಿಸಿದೆ. ಪ್ರಮೋದಾದೇವಿ ಪತ್ರಕ್ಕೆ ನಿನ್ನೆಯಷ್ಟೇ ಸಚಿವ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದರು. ನಮ್ಮದು ತಪ್ಪಿದ್ದರೆ ತಿದ್ದುಕೊಳ್ಳುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಕೂಡ ಹೇಳಿದ್ದಾರೆ.