Karnataka Rain Alert: IMD Forecasts Rain Until October 31; Check District-Wise Forecast. ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಅನರ್ಬ್ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ಇನ್ನೂ ಮೂರರಿಂದ ನಾಲ್ಕು ದಿನಗಳ ವರೆಗೆ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಕ್ಟೋಬರ್ 31ರ ವರೆಗೆ ಕರ್ನಾಟಕದಲ್ಲಿ ಮಳೆ ಆಗಲಿದೆ ಎಂದು ಐಎಂಡಿ ತಿಳಿಸಿದೆ.ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿದ್ದ ಅನರ್ಬ್ (Arnab) ಎಂಬ ಅತ್ಯಂತ ತೀವ್ರ ಚಂಡಮಾರುತವು, ನಿಧಾನವಾಗಿ ವಾಯುವ್ಯ ದಿಕ್ಕಿನತ್ತ ಚಲಿಸಿತು.