ಕೆಪಿಎಸ್ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಬಿ.ವಿ. ಗೀತಾ ಅವರನ್ನು ಮಂಗಳವಾರ ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳಿಗೆ 13 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಲಾಗಿದೆ. ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಹಗರಣಲ್ಲಿ (KPSC recruitment scam) ಬಂಧನವಾಗಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಬಿ.ವಿ. ಗೀತಾ ಅವರನ್ನು 13 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಬೆಂಗಳೂರಿನ 4ನೇ ಸಿಸಿಹೆಚ್ ನ್ಯಾಯಾಲಯ ಆದೇಶ ಹೊರಡಿಸಿದೆ.ಇಬ್ಬರನ್ನೂ ಮಂಗಳವಾರ ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಕೋರ್ಟ್ ಮುಂದೆ ಹಾಜರುಪಡಿಸಿದ್ದರು.