UAE President: ಟೆಲ್ ಅವಿವ್ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದೊಳಗೆ ನಡೆದ ಭೀಕರ ದಾಳಿಯ ಯತ್ನವನ್ನು ವಿಫಲಗೊಳಿಸಿ ನೂರಾರು ಪ್ರಯಾಣಿಕರ ಪ್ರಾಣ ಉಳಿಸಿದ ಭಾರತೀಯ ಮೂಲದ ಪೈಲಟ್ ಕ್ಯಾಪ್ಟನ್ ಸ್ಮ. ತಲೆಯ ಮೇಲಿನ ಹೊಲಿಗೆಗಳು ಹಾಗೂ ಎಡಗೈಗೆ ಸ್ಲಿಂಗ್ (ಕಟ್ಟು) ಧರಿಸಿ ಕಾರ್ಯಕ್ರಮಕ್ಕೆ ಬಂದಿದ್ದ ಕ್ಯಾಪ್ಟನ್ ಮಚ್ಚಾರ್ ಅವರ ಧೈರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಅದಕ್ಕಿಂತಲೂ ಹೆಚ್ಚಾಗಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹಾಗೂ ಪೈಲಟ್ ನಡುವಿನ ಆತ್ಮೀಯ ಮತ್ತು ತಮಾಷೆಯ ಸಂಭಾಷಣೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಎಲ್ಲರ ಗಮನ ಸೆಳೆದಿದೆ.