ಔರಾದ್: ನೆಮ್ಮದಿಯ ಜೀವನಕ್ಕೆ ಸದೃಢ ಆರೋಗ್ಯ ಅವಶ್ಯ. ಕಾಲ ಕಾಲಕ್ಕೆ ತಕ್ಕಂತೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ನೆಮ್ಮದಿಯಿಂದ ಜೀವನ ಸಾಗಿಸಬೇಕು ಎಂದು ಯಶಸ್ವಿನಿ ಜಿಲ್ಲಾ ಸಂಯೋಜಕ ಪ್ರಶಾಂತ ಸೋಪ್ಪಣ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಈ ಶಿಬಿರ ಏರ್ಪಡಿಸಲಾಗಿದೆ ಎಂದರು. ಪಿಡಿಒ ಸಂಗೀತಾ ದೇಶಮುಖ ಮಾತನಾಡಿ, ಇಂತಹ ಆರೋಗ್ಯ ಶಿಬಿರ ಹಳ್ಳಿಗಳಲ್ಲಿ ಹೆಚ್ಚು ನಡೆಯಬೇಕು. ಇದರಿಂದ ಗ್ರಾಮಾಂತರ ಪ್ರದೇಶದ ಜನಸಾಮಾನ್ಯರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಸಾಧ್ಯ ಎಂದರು.ಶಿಬಿರದಲ್ಲಿ 130ಕ್ಕೂ ಹೆಚ್ಚು ಜನರಿಗೆ ಬಿಪಿ, ಶುಗರ್ ಪರೀಕ್ಷೆ, ಇಸಿಜಿ ತಪಾಸಣೆ ಮಾಡಿ, ಉಚಿತ ಔಷಧ ನೀಡಲಾಯಿತು.