ಕಲಬುರಗಿ: ಕುಡಿಯುವ ನೀರಿನ ಕೊರತೆ ಸೇರಿದಂತೆ ರೈತರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಅಧಿಕಾರಿಗಳಿಗೆ... ಅಜಯ್ ಸಿಂಗ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಕಲಬುರಗಿ ಹಾಗೂ ಜೇವರ್ಗಿ ತಾಲೂಕುಗಳಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡ ಸಚಿವರು, ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರು, ಸಾರ್ವಜನಿಕರು ಹಾಗೂ ಸ್ಥಳೀಯ ಮುಖಂಡರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಬರ ಪರಿಸ್ಥಿತಿಯಿಂದ ಎದುರಾಗಿರುವ ಸಮಸ್ಯೆಗಳು, ಕುಡಿಯುವ ನೀರಿನ ಕೊರತೆ ಹಾಗೂ ಸ್ಥಳೀಯ ಬೇಡಿಕೆಗಳ ಕುರಿತು ಮನವಿ ಆಲಿಸಿ, ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.