ಎಂ.ಜಿ. ರಾಮಚಂದ್ರನ್ ಅವರ ಬಯೋಪಿಕ್ ಮಾಡಲು ಸಿದ್ಧತೆ ನಡೆದಿದೆ. ವರದಿಗಳ ಪ್ರಕಾರ, ಈ ಸಿನಿಮಾದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಪಾತ್ರದಲ್ಲಿ ನಟಿಸಲು ನಟಿ ತ್ರಿಷಾ ಅವರೊಂದಿಗೆ ಮಾತುಕತೆ ನಡೆಯುತ್ತಿದೆ. ಪಾತ್ರವರ್ಗದ ವಿವರಗಳ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ. ತಮಿಳು ಚಿತ್ರರಂಗದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇತ್ತೀಚಿನ ದಿನಗಳಲ್ಲಿ ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ರಾಜಕೀಯ ಹಾಗೂ ಸಿನಿಮಾ ವಲಯದಲ್ಲಿ ಭಾರೀ ಚರ್ಚೆಯಲ್ಲಿರುವ ತ್ರಿಷಾ, ಈಗ ಮತ್ತೊಂದು ಬಹುನಿರೀಕ್ಷಿತ ಸಿನಿಮಾದ ಮೂಲಕ ಗಮನ ಸೆಳೆದಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ನಟ ಎಂ.ಜಿ.