ಹಾಸನಾಂಬೆ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿ ದೇವತೆಯ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. 14 ದಿನಗಳ ಈ ಉತ್ಸವದಲ್ಲಿ 30 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಹಲವು ಹೊಸ ಆಕರ್ಷಣೆಗಳೊಂದಿಗೆ ಹಾಸನಾಂಬೆ ಮಹೋತ್ಸವ ಕಳೆಗಟ್ಟಿದೆ. ಇಲ್ಲಿವೆ ನೋಡಿ ಫೋಟೋಸ್. ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಹಾಸನಾಂಬೆ ದರ್ಶನೋತ್ಸವ ಇಂದಿನಿಂದ ಆರಂಭಗೊಂಡಿದೆ. ಮಧ್ಯಾಹ್ನ 12 ಗಂಟೆ 28 ನಿಮಿಷಕ್ಕೆ ಮಂತ್ರಘೋಷಗಳೊಂದಿಗೆ ಮಂಗಳ ವಾದ್ಯಗಳ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ತೆನೆ ಇರುವ ಬಾಳೆ ಕಡಿಯುವ ಮೂಲಕ ಗರ್ಭಗುಡಿ ಬಾಗಿಲು ತೆರೆಯಲಾಯಿತು. ನೆರೆದಿದ್ದ ಗಣ್ಯರು, ಸಹಸ್ರ ಭಕ್ತರು ದೇವಿಯ ವಿಶ್ವರೂಪ ದರ್ಶನ ಪಡೆದು ಪುನೀತರಾದರು.