ವಿಮಾನ ಇಂಧನ (ATF) ವೆಚ್ಚದಲ್ಲಿ ಭಾರೀ ಹೆಚ್ಚಳವಾಗಿರುವುದರಿಂದ ವಿಮಾನಯಾನ ಸಂಸ್ಥೆಯ ಮೇಲೆ ಬರುವ ಆರ್ಥಿಕ ಹೊರೆಯನ್ನು ತಗ್ಗಿಸಲು ವಿಮಾನ ಟಿಕೆಟ್ ದರಗಳನ್ನು ಹೆಚ್ಚಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಇಂಡಿಗೋ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (CEO) ಸ್ಪಷ್ಟಪಡಿಸಿದ್ದಾರೆ. ಇಂಧನ ವೆಚ್ಚ ಮತ್ತು ರುಪಾಯಿ ಮೌಲ್ಯ ಕುಸಿತದಿಂದಾಗಿ ಸಂಸ್ಥೆಗೆ ಹಿನ್ನಡೆಯಾಗುತ್ತಿರುವುದನ್ನು ವಿಲ್ಲೀ ವಾಲ್ಶ್ ವಿವರಿಸಿದ್ದಾರೆ. ನವದೆಹಲಿ, ಅಕ್ಟೋಬರ್ 29: ವಿಮಾನ ಇಂಧನ (ATF) ಬೆಲೆಯಲ್ಲಿ ಉಂಟಾಗಿರುವ ತೀವ್ರ ಏರಿಕೆಯಿಂದಾಗಿ ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ (IndiGo) ಮುಂದಿನ ದಿನಗಳಲ್ಲಿ ಟಿಕೆಟ್ ದರಗಳನ್ನು ಹೆಚ್ಚಿಸುವ ಸುಳಿವು ನೀಡಿದೆ.