ಪ್ರಧಾನಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 30 ಮತ್ತು 31ರಂದು ಗುಜರಾತ್ಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಬನಾಸ್ಕಾಂತ ಮತ್ತು ಏಕತಾ ನಗರದಲ್ಲಿ 14,400 ಕೋಟಿ ರೂ.ಗೂ ಹೆಚ್ಚಿನ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 24ನೇ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಿದ್ದಾರೆ. ಹಾಗೇ, 2 ನೂತನ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಹಾಗೂ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಏಕತಾ ನಗರದಲ್ಲಿ ಸಂಸ್ಕೃತಿ ಮತ್ತು ಕಲಾ ಪ್ರದರ್ಶನದ 'ಭಾರತ್ ಪರ್ವ್ 2026' ಅನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.