ಅರ್ನಬ್ ಚಂಡಮಾರುತದ ಹಿನ್ನೆಲೆಯಲ್ಲಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಒಡಿಶಾದ ಗಜಪತಿ ಜಿಲ್ಲೆಯ ಪ್ರಸಿದ್ಧ. ಭುವನೇಶ್ವರ, ಅಕ್ಟೋಬರ್ 29: ಅರ್ನಬ್ ಚಂಡಮಾರುತದ ಹಿನ್ನೆಲೆಯಲ್ಲಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಒಡಿಶಾದ ಗಜಪತಿ ಜಿಲ್ಲೆಯ ಪ್ರಸಿದ್ಧ 'ಗಂಡಹಾತಿ ಜಲಪಾತ' ಅಪಾಯಕಾರಿ ಮಟ್ಟದಲ್ಲಿ ಉಕ್ಕಿ ಹರಿಯುತ್ತಿದ್ದು, ನದಿ-ಕಾಲುವೆಗಳು ಮೈದುಂಬಿ ಹರಿಯುತ್ತಿವೆ. ಮಳೆನೀರು ಭಾರಿ ಪ್ರಮಾಣದಲ್ಲಿ ಹರಿದುಬರುತ್ತಿರುವುದರಿಂದ ಗಂಡಹಾತಿ ಜಲಪಾತವು ಅಪಾಯದ ಮಟ್ಟ ಮೀರಿ ಭೋರ್ಗರೆಯುತ್ತಿದ್ದು, ಜಲಪಾತದ ಸುತ್ತಮುತ್ತಲಿನ ಪ್ರವಾಸಿ ತಾಣ ಹಾಗೂ ಕೆಳಭಾಗದ ಹಳ್ಳಿಗಳಿಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗಂಜಾಂ ಮತ್ತು ಗಜಪತಿ ಜಿಲ್ಲೆಗಳ ತಗ್ಗು ಪ್ರದೇಶಗಳು, ಕೃಷಿ ಭೂಮಿಗಳು ಜಲಾವೃತಗೊಂಡಿವೆ. ಹಲವು ಮುಖ್ಯ ರಸ್ತೆಗಳ ಮೇಲೆ ನೀರು ಹರಿಯುತ್ತಿರುವುದರಿಂದ ಸಂಚಾರ ಸಂಪೂರ್ಣವಾಗಿ ಕಡಿತಗೊಂಡಿದೆ.