ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಭಾವ ಹಾಗೂ ಪಾರದರ್ಶಕತೆ ತಿಳಿಯಲು ‘ಪ್ರೊಜೆಕ್ಟ್ ಕೆ-ಮಾನಿಟರ್’ ಅಡಿಯಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ಸಮೀಕ್ಷೆ ನಡೆಸಲು ಸಂಪುಟ ಅನುಮೋದನೆ ನೀಡಿದೆ. ಯೋಜನೆಗಳ ವೈಜ್ಞಾನಿಕ ಆಡಿಟ್ಗಾಗಿ ಈ ಕ್ಷೇತ್ರ ಅಧ್ಯಯನ ನಡೆಸಲಾಗುತ್ತಿದ್ದು, ಇದಕ್ಕೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಂಗಳೂರು, ಅಕ್ಟೋಬರ್ 30: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪ್ರತಿಷ್ಠಿತ ಗ್ಯಾರಂಟಿ ಯೋಜನೆಗಳು ಹಾಗೂ ಇತರೆ ಜನಪರ ಕಾರ್ಯಕ್ರಮಗಳು ಸಾರ್ವಜನಿಕರ ಜೀವನಮಟ್ಟದ ಮೇಲೆ ಬೀರಿರುವ ಪರಿಣಾಮವನ್ನು ತಿಳಿಯಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಉದ್ದೇಶಕ್ಕಾಗಿ ಒಟ್ಟು 14 ಕೋಟಿ ರೂ.