ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಖಾಸಗಿ ಬಸ್ ಸಿಬ್ಬಂದಿ ತಮ್ಮ ಸಮಯಪ್ರಜ್ಞೆ ಮತ್ತು ಮಾನವೀಯತೆ ಮೆರೆದಿದ್ದಾರೆ. ಚಲಿಸುತ್ತಿದ್ದ ಬಸ್ನಲ್ಲಿ ತುಂಬು ಗರ್ಭಿಣಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಾಗ, ಚಾಲಕ ಮತ್ತು ನಿರ್ವಾಹಕರು ಬಸ್ ಅನ್ನು ನೇರವಾಗಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು ತಾಯಿ ಮತ್ತು ಮಗುವಿನ ಜೀವ ಉಳಿಸಿದ್ದಾರೆ. ಅವರ ಸಮಯೋಚಿತ ನಿರ್ಧಾರಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿರಾಜಪೇಟೆ, ಅ.30: ಚಲಿಸುತ್ತಿದ್ದ ಬಸ್ನಲ್ಲಿ ತುಂಬು ಗರ್ಭಿಣಿಯೊಬ್ಬರಿಗೆ ಹಠಾತ್ತಾಗಿ ಹೆರಿಗೆ ನೋವು ಕಾಣಿಸಿಕೊಂಡಾಗ, ಸಮಯ ಪ್ರಜ್ಞೆ ಹಾಗೂ ಮಾನವೀಯತೆ ಮೆರೆದ ಖಾಸಗಿ ಬಸ್ ಸಿಬ್ಬಂದಿ ಬಸ್ಅನ್ನು ನೇರವಾಗಿ ಸರ್ಕಾರಿ ಆಸ್ಪತ್ರೆಯ ಆವರಣಕ್ಕೇ ಕೊಂಡೊಯ್ದು ತಾಯಿ-ಮಗುವಿನ ಜೀವ ಉಳಿಸಿದ ಶ್ಲಾಘನೀಯ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ.