INDIA Bloc Rally: ಇಂಡಿಯಾ ಮೈತ್ರಿಕೂಟದ ವತಿಯಿಂದ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ರ್ಯಾಲಿ ಸ್ಥಳೀಯ ವ್ಯಾಪಾರಿ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಹಬ್ಬದ ಸೀಸನ್ನಲ್ಲಿ ನಡೆಯಲಿರುವ ಈ ರಾಜಕೀಯ ಕಾರ್ಯಕ್ರಮದಿಂದ ವ್ಯಾಪಾರ-ವಹಿವಾಟಿಗೆ ತೀವ್ರ ತೊಂದರೆಯಾಗಲಿದೆ ಎಂದು ಚೇಂಬರ್ ಆಫ್ ಟ್ರೇಡ್ ಅಂಡ್ ಇಂಡಸ್ಟ್ರಿ (CTI) ಸೇರಿದಂತೆ ವಿವಿಧ ವ್ಯಾಪಾರ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ..ಸಿಟಿಐ ಅಧ್ಯಕ್ಷ ಬ್ರಿಜೇಶ್ ಗೋಯಲ್ ಮಾತನಾಡಿ, ರಾಮಲೀಲಾ ಮೈದಾನದ ಸುತ್ತಮುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸದರ್ ಬಜಾರ್, ಖಾರಿ ಬೋಲಿ ಮತ್ತು ಚಾಂದನಿ ಚೌಕ್ನಂತಹ 20ಕ್ಕೂ ಹೆಚ್ಚು ಪ್ರಮುಖ ಸಗಟು ಹಾಗೂ ಚಿಲ್ಲರೆ ಮಾರುಕಟ್ಟೆಗಳಿವೆ.